ವಾಟಾಳ್ ನಾಗರಾಜ್ ಪತ್ನಿ ಜ್ಞಾನಾಂಬಿಕೆ ನಿಧನ

12:11 AM, Wednesday, August 5th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

jnanabikeಬೆಂಗಳೂರು : ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಮಂಗಳವಾರ ನಿಧನ ಹೊಂದಿದ್ದಾರೆ.

ಕಿಡ್ನಿ ವೈಫಲ್ಯದಿಂದ ಅವರು ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿ ಪುರಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ರವರ ಸ್ವಗೃಹ ಡಾಲರ್ಸ್ ಕಾಲನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸ್ವಗ್ರಾಮದಲ್ಲಿ ವಿಧಿ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English