ಕೊರೋನಾ ಸೋಂಕು ಆಗಸ್ಟ್ 5 : ದಕ್ಷಿಣ ಕನ್ನಡ 149, ಸಾವು 10, ಉಡುಪಿ ಜಿಲ್ಲೆ 173, ಸಾವು 2

12:32 AM, Thursday, August 6th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬುಧವಾರ 149 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ.

ಬುಧವಾರದಂದು 82 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 3009 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಬುಧವಾರದಂದು ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 3343ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು 173 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 5141ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. 72 ವರ್ಷದ ಪುರುಷ ಮತ್ತು 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಬುಧವಾರ ಮತ್ತೆ 124 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. ಸದ್ಯ ಉಡುಪಿಯಲ್ಲಿ 2027 ಸಕ್ರಿಯ ಪ್ರಕರಣಗಳಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English