ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 173 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್‌ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ 217 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ5353 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಲ್ಲಿಯ ತನಕ 1685 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರ 85 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಕೊರೊನಾದಿಂದ ಗುರುವಾರ ಉಡುಪಿ ಜಿಲ್ಲೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಆ ಮೂಲಕ ಮರಣ ಹೊಂದಿದವರ ಒಟ್ಟು ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಉಡುಪಿಯ 82 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ, ಕುಂದಾಪುರ ತಾಲೂಕಿನ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಾರ್ಕಳ ತಾಲೂಕಿನ 75 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಡುಪಿ ತಾಲ್ಲೂಕಿನ 36 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆ ಹೊಂದಿದ್ದ 75 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
Click this button or press Ctrl+G to toggle between Kannada and English