ಕೊರೋನಾ ಸೋಂಕು ಆಗಸ್ಟ್ 9 : ದಕ್ಷಿಣ ಕನ್ನಡ 132, ಸಾವು 6, ಉಡುಪಿ 282

1:02 AM, Monday, August 10th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona ಮಂಗಳೂರು : ದಕ್ಷಿಣ ಕನ್ನಡದಲ್ಲಿ ರವಿವಾರ 132 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 7207ಕ್ಕೆ ಏರಿಕೆಯಾಗಿದೆ

ಜಿಲ್ಲೆಯಲ್ಲಿ ರವಿವಾರ 195 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3305 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಆ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 3682ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ರವಿವಾರ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ರವಿವಾರ 282 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ.

ರವಿವಾರ ಉಡುಪಿ ತಾಲೂಕಿನ 152, ಕುಂದಾಪುರ ತಾಲೂಕಿನ 86, ಹಾಗೂ ಕಾರ್ಕಳ ತಾಲೂಕಿನ 43 ಮಂದಿಗೆ ಕೊರೊನಾ ದೃಢವಾಗಿದೆ. ಈ ಪೈಕಿ 77 ಮಂದಿಗೆ ಕೊರೊನಾ ಲಕ್ಷಣಗಳು ಪತ್ತೆಯಾಗಿದ್ದು, ಇನ್ನುಳಿದ 205 ಜನರಿಗೆ ಕೊರೊನಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಈವರೆಗೆ 44.824 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 37,325 ಮಂದಿಯ ವರದಿ ನೆಗಟಿವ್‌ ಆದರೆ, 6,201 ಮಂದಿ ವರದಿ ಪಾಸಿಟಿವ್‌‌‌ ಆಗಿದೆ. 1,298 ಮಂದಿಯ ಪರೀಕ್ಷಾ ವರದಿ ಇನ್ನು ಬರಬೇಕಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English