ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

7:27 PM, Monday, August 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

anush ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ.

ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ !

ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ.

ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ.

ಕೋವಿಡ್-19 ಸೋಂಕು ಭೀತಿ ಇದ್ದರೂ ಈ ಬಾರಿ 8,11,050 ಮಂದಿ ಈ ಬಾರಿ ಪರೀಕ್ಷೆ ಬರೆದಿದ್ದರು.

ಈ ಬಾರಿಯ ಪರೀಕ್ಷೆಯಲ್ಲಿ 66.41 ಶೇ ಬಾಲಕರು ಉತ್ತೀರ್ಣರಾಗಿದ್ದರೆ, ಶೇ. 77.74 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English