ಕೊರೋನ ಸೋಂಕು ಆಗಸ್ಟ್ 12 : ದಕ್ಷಿಣ ಕನ್ನಡ 229 , ಉಡುಪಿ 263

11:54 PM, Wednesday, August 12th, 2020
Share
1 Star2 Stars3 Stars4 Stars5 Stars
(No Ratings Yet)
Loading...

coronavirus ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ದಂದು 229 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ 498 ಮಂದಿ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ.

‘ಪಾಂಡೆಮಿಕ್’ ಕಿರು ಚಿತ್ರ ಆಗಸ್ಟ್ 15 ರಂದು ಮೆಗಾ ಮೀಡಿಯಾ ನ್ಯೂಸ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ 

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7825ಕ್ಕೆ ಏರಿಕೆಯಾಗಿದೆ. ಈ ಪೈಕಿ 5232 ಮಂದಿ ಒಟ್ಟು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2349 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ 7 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 244ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಸೋಂಕಿತರ  113 ಮಂದಿ ಐಎಲ್ ಐ ಪ್ರಕರಣಗಳು ದೃಢಪಟ್ಟಿವೆ. 11 ಸಾರಿ ಪ್ರಕರಣಗಳು ಪತ್ತೆಯಾಗಿವೆ. 69 ಸೋಂಕಿತರ ಮೂಲ ಪತ್ತೆಯಾಗಿವೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು 263 ಮಂದಿಯಲ್ಲಿ  ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6766ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 34 ಐಎಲ್ಐ ಪ್ರಕರಣಗಳು ಪತ್ತೆಯಾಗಿದ್ದು, ಅಂತರಾಜ್ಯ ಪ್ರಯಾಣದಿಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. 128 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಬುಧವಾರದಂದು 198 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ.

ಉಡುಪಿ 142 ಪ್ರಕರಣಗಳು, ಕುಂದಾಪುರದಲ್ಲಿ 95 ಪ್ರಕರಣಗಳು, ಕಾರ್ಕಳದಲ್ಲಿ 23 ಪ್ರಕರಣಗಳು ಪತ್ತೆಯಾಗಿವೆ. ಬುಧವಾರದಂದು ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಾರ್ಕಳ ತಾಲ್ಲೂಕಿನ 81 ವರ್ಷದ ವ್ಯಕ್ತಿ ಹಾಗೂ ಉಡುಪಿಯ 66 ವರ್ಷದ ಮತ್ತು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English