ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪದ ಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿರುವ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿರುದೆ.
ಸುಮಾರು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಬೇಕರಿ ಮಾಲೀಕ ರಾಜೇಶ್ ಅವರು ತಿಳಿಸಿದ್ದಾರೆ. ಇತ್ತೀಚಿಗೆ ಅಷ್ಟೇ ಈ ಅಂಗಡಿಯ ನವೀಕರಣ ಕೆಲಸಗಳನ್ನು ಮಾಡಲಾಗಿದೆ. ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ಬಳಿಕ ಮಧ್ಯ ರಾತ್ರಿ ವೇಳೆ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Click this button or press Ctrl+G to toggle between Kannada and English