ಮಂಗಳೂರು : ಮುಡಿಪು ಬಾರ್ ನಲ್ಲಿ ನಡೆದ ಪೃಥ್ವಿಪಾಲ್ ರೈ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ, ಹಫ್ತಾ ವಸೂಲಿ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಎಕ್ಕೂರು ಬಾಬಾ (61) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಹಿಂದೂ ಯುವಸೇನೆಯಲ್ಲಿ ಗುರುತಿಸಿಕೊಂಡಿದ್ದ ಎಕ್ಕೂರು ಬಾಬಾ 1980 ರಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡಿದ್ದ ಬಾಬಾ ಫೈನಾನ್ಸ್ ವ್ಯವಹಾರ, ವಸೂಲಿ ಮಾಡುವುದರಲ್ಲಿ ಮುಂಚೂಣಿಯಲ್ಲಿತ್ತು, ಎಕ್ಕೂರು ಶೀನ ಬಾಬಾನ ಬಲಗೈ ಬಂಟ ನಂತಿದ್ದು ಹಲವಾರು ಪ್ರಕರಣಗಳಲ್ಲಿ ಸಹಾಯ ಮಾಡಿದ್ದ.
ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶುಭಕರ ಶೆಟ್ಟಿ ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆಗೆ ಒಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಉಸಿರಾಟದ ಸಮಸ್ಯೆ ಬಿಗಡಾಯಿಸಿದ ಹಿನ್ನೆಲೆ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಇಂದು ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈ ನಡುವೆ, ಹೃದಯಾಘಾತಕ್ಕೆ ಒಳಗಾಗಿದ್ದು ಸಂಜೆ ಹೊತ್ತಿಗೆ ಮೃತಪಟ್ಟಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಧುಮೇಹ ಸಹಿತ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಬಾಬಾ ಕಳೆದ ಹತ್ತು ವರ್ಷಗಳಲ್ಲಿ ರೌಡಿಸಂನಿಂದ ದೂರವಿದ್ದು ಸಜ್ಜನಂತೆ ಗುರುತಿಸಿಕೊಂಡಿದ್ದರು.
ಬಾಬಾ ಪತ್ನಿ, ಪುತ್ರ, ಮೂವರು ಸಹೋದರರು, ಸಹೋದರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Click this button or press Ctrl+G to toggle between Kannada and English