ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೃತ್ಯು

8:14 PM, Sunday, August 16th, 2020
Share
1 Star2 Stars3 Stars4 Stars5 Stars
(No Ratings Yet)
Loading...

boatಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಪರಿಣಾಮ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕೊಡೇರಿ ಎಂಬಲ್ಲಿ ರವಿವಾರ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಬೆಳಗ್ಗೆ 10.30ರ ಸುಮಾರಿಗೆ ಸಾಗರಶ್ರೀ ಎಂಬ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ.  ಒಟ್ಟು 9 ಮಂದಿ ಮೀನುಗಾರರು ತೆರಳಿದ್ದರು.

ಈ ನಾಲ್ವರ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English