ತಂದೆ – ಮಗನ ನಡುವೆ ಕಾಳಗ, ಆಸ್ಪತ್ರೆ ದಾರಿಯಲ್ಲಿ ತಂದೆ ಮೃತ್ಯು

11:33 PM, Monday, August 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

quarrelಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ.

ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಘರ್ಷಣೆಯಲ್ಲಿ ಪುತ್ರ ಶಶಿಧರ್ ಅವರಿಗೂ ಗಾಯಗಳಾಗಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English