ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 144 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೆ ಎಂಟು ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,022ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಮೂವರು, ಬಂಟ್ವಾಳ ಮತ್ತು ಪುತ್ತೂರು ತಾಲೂಕಿನ ತಲಾ ಓರ್ವರು, ಮೂವರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಮಾಣದ ದಿನೇದಿನೇ ಹೆಚ್ಚುತ್ತಲೇ ಸಾಗಿದೆ. ಸೋಮವಾರವೂ 144 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತರ ಸಂರ್ಪದಲ್ಲಿದ್ದ 21 ಮಂದಿಗೆ ಸೋಂಕು ತಗುಲಿದೆ. ಇನ್ನು ಸಾಮಾನ್ಯ ಶೀತ ಲಕ್ಷಣ-60, ತೀವ್ರ ಉಸಿರಾಟ ತೊಂದರೆ-16, ಸೋಂಕು ನಿಗೂಢ ಪ್ರಕರಣ-47 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮಂಗಳೂರು-88, ಬಂಟ್ವಾಳ-18, ಪುತ್ತೂರು-8, ಸುಳ್ಯ-1, ಬೆಳ್ತಂಗಡಿ-10, ಹೊರಜಿಲ್ಲೆಯ 19 ಮಂದಿಯಲ್ಲಿ ಕೊರೋನ ಸೋಂಕು ಖಚಿತ ವಾಗಿದೆ. ಸೋಂಕಿತರೆಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದ.ಕ. ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರ, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 209 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಮುಕ್ತರಾದವರ ಸಂಖ್ಯೆ 6,654ಕ್ಕೆ ಏರಿಕೆಯಾಗಿದೆ. ಸೋಮವಾರ ಗುಣಮುಖರಾದವರ ಪೈಕಿ 100 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 96 ಮಂದಿ, ಕೋವಿಡ್ ಆರೈಕೆ ಕೇಂದ್ರದಲ್ಲಿದ್ದ 13 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 2,091 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ 270 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8238ಕ್ಕೆ ಏರಿಕೆಯಾಗಿದೆ.
ಇನ್ನು ಸೋಮವಾರದಂದು ಜಿಲ್ಲೆಯಲ್ಲಿ ಮತ್ತೆ 269 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. ಈ ನಡುವೆ ಮತ್ತೊಬ್ಬರು ಸೋಮವಾರದಂದು ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿಯಲ್ಲಿ 56 ವರ್ಷದ ವ್ಯಕ್ತಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಸೋಮವಾರದಂದು ಪತ್ತೆಯಾದ ಸೋಂಕಿತರ ಪೈಕಿ 86 ಲಕ್ಷಣ ಇರುವ ಸೊಂಕಿತರಾಗಿದ್ದು, 184 ಮಂದಿ ಲಕ್ಷಣ ರಹಿತ ಸೊಂಕಿತರಾಗಿದ್ದಾರೆ.
Click this button or press Ctrl+G to toggle between Kannada and English