ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು

4:13 PM, Tuesday, August 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Zameer Ahmedಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್ ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English