- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು

Zameer Ahmed [1]ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್ ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.