ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 234 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬುಧವಾರ 115 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಬುಧವಾರದ ವರದಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 9535ಕ್ಕೆ ಏರಿಕೆಯಾಗಿದೆ. ಈ ವರೆಗೆ 6942 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಸದ್ಯ ದ.ಕ ಜಿಲ್ಲೆಯಲ್ಲಿ 2303 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕೊರೊನಾ ಸೋಂಕಿಗೆ ಬುಧವಾರ ನಾಲ್ವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 290ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ ಸಂಪರ್ಕದಿಂದ 35 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 104 ಮಂದಿಯಲ್ಲಿ ಕೊರೊನಾ ಐಎಲ್‌ಐ ಕೇಸ್ ಪತ್ತೆಯಾಗಿದೆ. 18 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. ಇನ್ನು 76 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು 375 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 99 ಮಂದಿಯಲ್ಲಿ ಲಕ್ಷಣ ಸಹಿತ ಸೊಂಕು ಪತ್ತೆಯಾಗಿದೆ. ಇನ್ನು ಪ್ರಾಥಮಿಕ ಸಂಪರ್ಕದಿಂದ 205 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು 5 ಸಾರಿ ಪ್ರಕರಣಗಳು ಪತ್ತೆಯಾಗಿವೆ.ಅಂತರ್ ರಾಜ್ಯ ಪ್ರಯಾಣ ಮುಗಿಸಿ ಬಂದ 5 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 9034 ಕ್ಕೆ ಏರಿಕೆಯಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 174 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದರಲ್ಲಿ 15 ಮಂದಿ ವಿದೇಶದಿಂದ ಹಾಗೂ ಐದು ಮಂದಿ ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಬುಧವಾರ ಇದುವರೆಗಿನ ಗರಿಷ್ಟ ಸಂಖ್ಯೆಯ ಪಾಸಿಟಿವ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಈ ನಡುವೆ 89 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
.
Click this button or press Ctrl+G to toggle between Kannada and English