ಮಂಗಳೂರು : ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳಿಗೆ ಕೊರೊನಾ ಪ್ರಕರಣ ನಿಭಾಯಿಸಲು ವೈದ್ಯರು ಸಹಿತ ನುರಿತ ಸಿಬ್ಬಂಧಿಗಳ ವ್ಯವಸ್ಥೆ ಮಾಡದೆ ಬರೇ ಇರುವ ವೈದ್ಯರುಗಳಿಂದಲೇ ವಿಪರೀತ ಕೆಲಸಗಳನ್ನು ನಿರ್ವಹಿಸಿದ ಕಾರಣ ಒತ್ತಡಕ್ಕೆ ಸಿಲುಕಿದ ವೈದ್ಯರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಯ ನಿರ್ಮಾಣ ಇದು ಸರಕಾರದ ಆರೋಗ್ಯ ಇಲಾಖೆಯ ವೈಫಲ್ಯತೆ. ಮೈಸೂರಿನ ತಾಲೂಕು ವೈದ್ಯಾಧಿಕಾರಿ ಡಾ ನಾಗೇಂದ್ರ ಅವರನ್ನು ಬಲಿಪಡೆದಿದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಇಂದು ಉರ್ವಸ್ಟೋರ್ ನಲ್ಲಿ ಡಿವೈಎಫ್ಐ ನೇತೃತ್ವದಲ್ಲಿ ನಡೆದ ಸರಕಾರಿ ಆಸ್ಪತ್ರೆ ಬಲಪಡಿಸಿರಿ ಖಾಸಗೀ ಆಸ್ಪತ್ರೆಗಳನ್ನು ನಿಯಂತ್ರಿಸಿರಿ ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಮತ್ತು ಎಲ್ಲ ಕೊರೊನಾ ಸೊಂಕಿತರಿಗೆ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಸರಕಾರ ಕೊರೊನಾ ರೋಗ ಎದುರಿಸಲು ಬೇಕಾದ ಸಲಕರಣೆಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ. ಸರಕಾರದ ಆಸ್ಪತ್ರೆಗಳಿಗೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಖಾಲಿ ಇರುವ ಹುದ್ದೆ ಗಳನ್ನು ಭರ್ತಿಗೊಳಿಸುವ ಹಾಗು ಹೆಚ್ಚುವರಿ ಸಿಬ್ಬಂಧಿಗಳನ್ನು ನೇಮಿಸುವ ಯಾವುದೇ ಕೆಲಸಗಳು ಈವರೆಗೂ ನಡೆದಿಲ್ಲ. ಸರಕಾರಿ ಆಸ್ಪತ್ರೆಗಳ ವೈಫಲ್ಯತೆ ಖಾಸಗೀ ಆಸ್ಪತ್ರೆಗಳು ಕೊರೊನಾ ಹೆಸರಲಿ ಊಟಿ ಮಾಡುವ ಸ್ಥಿತಿಗೆ ತಲುಪುವಂತೆ ಮಾಡಿದೆ. ಖಾಸಗೀ ಆಸ್ಪತ್ರೆಗಳು ಯಾವುದೇ ಮುಲಾಜಿಲ್ಲದೇ ಚಿಕಿತ್ಸೆ ಹೆಸರಲ್ಲಿ ರೋಗಿಗಳನ್ನು ವಂಚಿಸುವ ಪ್ರಕರಣ ದಿನ ನಿತ್ಯ ವರದಿಯಾದರೂ ಖಾಸಗೀ ಆಸ್ಪತ್ರೆಯ ವಿರುದ್ದ ಈವರೆಗೆ ಒಂದೇ ಒಂದು ಕ್ರಮಕೈಗೊಳ್ಳಲು ಸಾದ್ಯವಾಗಿಲ್ಲ. ಈಗಾಗಲೇ ಜನ ಸಾಮಾನ್ಯರು ಉದ್ಯೋಗವಿಲ್ಲದೆ , ಬಿಡಿಗಾಸು ಇಲ್ಲದೇ ಕಂಗಾಲಾಗಿದ್ದು ಒಂದೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಇನ್ನು ಆರೋಗ್ಯ ಕಾಳಜಿ ವಹಿಸೋದು ಅವರಿಂದ ಸಾದ್ಯವಾಗದ ಮಾತು. ಆರೋಗ್ಯ ಕಾಳಜಿ ವಹಿಸೋದು ಸರಕಾರದ ಕರ್ತವ್ಯ. ಸರಕಾರ ಎಲ್ಲ ಕೊರೊನಾ ಸೊಂಕಿತರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಡಿವೈಎಫ್ಐ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ವೇಳೆ ಡಿವೈಎಫ್ಐ ಉರ್ವಸ್ಟೋರ್ ಘಟಕದ ಅದ್ಯಕ್ಷ ಪ್ರಶಾಂತ್ ಎಂ.ಬಿ, ಮನೋಜ್ ಉರ್ವಸ್ಡೋರ್, ಕಿಶೋರ್, ನಾಗೇಂದ್ರ, ರಘುವೀರ್, ತಿಲಕ್, ತೇಜಸ್ವಿನಿ, ಹರಿಣಾಕ್ಷಿ ಮುಂತಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English