- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

25 ವರ್ಷದ ಮಹಿಳೆಯ ಮೇಲೆ 139 ಮಂದಿ ಅತ್ಯಾಚಾರ

rape [1]ಹೈದರಾಬಾದ್: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಸದಸ್ಯರು, ಸಿನಿಮಾ ಕ್ಷೇತ್ರದವರು, ಪತ್ರಕರ್ತರು, ವೈದ್ಯರು ಸೇರಿದಂತೆ 139 ಮಂದಿ ನನ್ನ ಮೇಲೆ 5000ಕ್ಕೂ ಹೆಚ್ಚು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು 25 ವರ್ಷದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಇವರ ಪೈಕಿ ಹಲವರು ಅಮೆರಿಕಾ ಮತ್ತು ಬೆಂಗಳೂರಿನಲ್ಲಿ ಇರುವುದಾಗಿ ಹೈದರಾಬಾದ್ ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ.

ಗಂಡನ ಮನೆಯವರಿಂದ 2009ರಲ್ಲಿ ಲೈಂಗಿಕ ದೌರ್ಜನ್ಯ, ಹಿಂಸೆ ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆ 2010ರಲ್ಲಿ ಗಂಡನಿಗೆ ವಿಚ್ಛೇದನ ನೀಡಿದ್ದಳು. ಬಳಿಕೆ ಕಾಲೇಜಿಗೆ ಸೇರಿ ವಿದ್ಯಾಭ್ಯಾಸ ಆರಂಭಿಸಿದ್ದಳು.

ವಿದ್ಯಾಭ್ಯಾಸ  ಮಾಡುತ್ತಿದ್ದಾಗಲೂ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರ ನಿಲ್ಲಲಿಲ್ಲ. ನನ್ನ ಮೇಲೆ ಮಹಿಳೆಯರು ಸಹ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಇನ್ನು ಹಲವರು ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡು ನನ್ನನ್ನು ಹೆದರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಎಫ್ಐಆರ್ ನಿಂದ ತಿಳಿದುಬಂದಿದೆ.

ಮಹಿಳೆಯ ದೂರಿನನ್ವಯ ಪೊಲೀಸರು ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಇದೇ ವೇಳೆ ದೂರಿಗೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.