- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ 193 ಐದು ಸಾವು, ಉಡುಪಿ ಜಿಲ್ಲೆ 117 ಎರಡು ಸಾವು

corona [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಆಗಸ್ಟ್ 23 ರಂದು 193 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10330 ಕ್ಕೆ ಏರಿದೆ. ಉಡುಪಿ ಜಿಲ್ಲೆಯಲ್ಲಿ ಭಾನುವಾರ  117 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10126 ಕ್ಕೆ ಏರಿಕೆಯಾಗಿದೆ.

ಭಾನುವಾರದ ಪಾಸಿಟಿವ್ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 130, ಬಂಟ್ವಾಳದಲ್ಲಿ 21, ಸುಳ್ಯದಲ್ಲಿ 19, ಪುತ್ತೂರಿನಲ್ಲಿ 6, ಬೆಳ್ತಂಗಡಿಯಲ್ಲಿ 8 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 9 ಮಂದಿಗೆ ಪಾಸಿಟಿವ್‌ ಆಗಿದೆ.  193 ಸೋಂಕಿತರ ಪೈಕಿ 108 ಮಂದಿಯಲ್ಲಿ ರೋಗದ ಗುಣಲಕ್ಷಣಗಳಿದ್ದು 85 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ.

ಒಟ್ಟು  164 ಮಂದಿ ಭಾನುವಾರ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 7677 ಕ್ಕೆ ಏರಿಕೆಯಾಗಿದೆ.

ಭಾನುವಾರ  ಜಿಲ್ಲೆಯಲ್ಲಿ ಐದು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಮೂವರು ಮಂಗಳೂರಿನವರಾಗಿದ್ದು ಇಬ್ಬರು ಬಂಟ್ವಾಳ ತಾಲೂಕಿನವರಾಗಿದ್ದಾರೆ. ಈವರೆಗೆ 310 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೆಯೇ ಪ್ರಸ್ತುತ 2343 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ 105 ಐಎಲ್‌ಎ, 8 ಎಸ್‌ಎಆರ್‌ಐ ಪ್ರಕರಣಗಳಾಗಿದ್ದು 45 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಇನ್ನು 34 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಒಬ್ಬರು ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಭಾನುವಾರ 1 17 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10126 ಕ್ಕೆ ಏರಿಕೆಯಾಗಿದೆ. ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಭಾನುವಾರ ಸೋಂಕು ದೃಢಪಟ್ಟ 117 ಮಂದಿಯ ಪೈಕಿ 39 ಮಂದಿಗೆ ಸೋಂಕು ಲಕ್ಷಣಗಳಿದ್ದು 78 ಮಂದಿಯಲ್ಲಿ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಇನ್ನು ಕೂಡಾ 1330 ಮಂದಿಯ ಕೊರೊನಾ ವರದಿ ಬರಬೇಕಾಗಿದೆ. 58, ಕುಂದಾಪುರದಲ್ಲಿ 35, ಕಾರ್ಕಳ ತಾಲ್ಲೂಕಿನಲ್ಲಿ 20 ಪ್ರಕರಣ ಪತ್ತೆಯಾಗಿದೆ. ಹಾಗೆಯೇ ನಾಲ್ವರು ಇತರೆ ಜಿಲ್ಲೆಯವರಲ್ಲಿ ಸೋಂಕು ದೃಢಪಟ್ಟಿದೆ.

ಭಾನುವಾರ 309 ಮಂದಿ ಸೋಂಕಿತರು ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ 7401 ಸೋಂಕಿತರು ಗುಣಮುಖರಾಗಿದ್ದಾರೆ.

ಭಾನುವಾರ ಸಾವನ್ನಪ್ಪಿದವರಲ್ಲಿ  ಒಬ್ಬರು ಉಡುಪಿ ತಾಲೂಕಿನ 42 ವರ್ಷದ ಗಂಡಸಾಗಿದ್ದು ಮತ್ತೋರ್ವರು ಕಾರ್ಕಳ ತಾಲೂಕಿನ 73 ವರ್ಷದ ಗಂಡಸಾಗಿದ್ದಾರೆ. ಈವರೆಗೂ 84 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಭಾನುವಾರ 372 ಕೊರೊನಾ ವರದಿ ನೆಗೆಟಿವ್‌ ಆಗಿದ್ದು ಪ್ರಸ್ತುತ 2,648 ಸೋಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.