ವಾಕಿಂಗ್ ಮಾಡುತ್ತಿದ್ದ ಟ್ಯಾಕ್ಸಿ ಡ್ರೈವರ್ ಮೇಲೆ ತಲವಾರು ದಾಳಿ ನಡೆಸಿ ಕೊಲೆ

12:09 PM, Monday, August 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Belthangady ಬೆಳ್ತಂಗಡಿ : ಬೆಳಗ್ಗಿನ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಮೂವರು ದುಷ್ಕರ್ಮಿಗಳ  ತಂಡ ದಾಳಿ ನಡೆಸಿದಾಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಾಸು ಸಪಲ್ಯ(65) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಿಗ್ಗೆ ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವಾಸು ಸಪಲ್ಯ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಮಗ ಕೂಡ ಚಾಲಕ ವೃತ್ತಿ ನಿರ್ವಹಿಸುತ್ತಿದ್ದು, ಮದ್ಯಪಾನ ಮಾಡಿ ತಂದೆ ಜೊತೆ ಗಲಾಟೆ ಅಗಿ ಈ ಹಿಂದೆ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ವಾಸು ಸಪಲ್ಯ ಅವರ ಎರಡನೇ ಮಗ ದಯಾನಂದ ಇಂದು ಬೆಳಗ್ಗೆ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಬರುತ್ತಿರುವುದರಿಂದ ಅನುಮಾನ ವ್ಯಕ್ತವಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ ತಲವಾರ್ ಪತ್ತೆಯಾಗಿದೆ. ಬೆಳ್ತಂಗಡಿ ಪಿಎಸ್ಐ ನಂದಕುಮಾರ್ , ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ತಂಡ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English