ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 247 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 10774ಕ್ಕೆ ಏರಿಕೆಯಾಗಿದೆ.
247 ಮಂದಿ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 85 ಮಂದಿಗೆ ಕೊರೊನಾ ದೃಢಪಟ್ಟಿದೆ. 72 ಐಎಲ್‌ಐ ಪ್ರಕರಣಗಳಾಗಿದ್ದು, 11 ಸಾರಿ ಪ್ರಕರಣಗಳಾಗಿವೆ. 78 ಮಂದಿಯ ಸೋಂಕಿನ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
ಮಂಗಳವಾರದಂದು 218 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ 8136 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದಂತಾಗಿದೆ. ಮಂಗಳವಾರ ಮೂವರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸದ್ಯ ದ.ಕ ಜಿಲ್ಲೆಯಲ್ಲಿ 2323 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಈವರೆಗೆ ಜಿಲ್ಲೆಯಲ್ಲಿ 319 ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರದಂದು 217 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10446ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮತ್ತೆ ಮಂಗಳವಾರ ಕೊರೊನಾಗೆ ಇಬ್ಬರು ಮೃತಪಟ್ಟಿದ್ದಾರೆ. ಆ ಮೂಲಕ ಉಡುಪಿ ಜಿಲ್ಲೆಯಲ್ಲಿ ಮೃತರ ಸಂಖ್ಯೆ 91 ಕ್ಕೆ ಏರಿಕೆಯಾಗಿದೆ. ಉಡುಪಿಯ 87 ವರ್ಷದ ವೃದ್ದ ಕೊರೊನಾಗೆ ಸಾವನ್ನಪ್ಪಿದ್ದಾರೆ. ಕುಂದಾಪುರದ 67 ವರ್ಷದ ವೃದ್ದ ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 2625 ಸಕ್ರಿಯ ಪ್ರಕರಣಗಳಿವೆ.
ಇನ್ನು ಸದ್ಯ ಪ್ರಾಥಮಿಕ ಸಂಪರ್ಕದಿಂದ 82 ಮಂದಿಗೆ ಕೊರೊನಾ ದೃಢಪಟ್ಟಿದೆ. ಮಂಗಳವಾರ ಜಿಲ್ಲೆಯಲ್ಲಿ 69 ಐಎಲ್‌ಐ, 6 ಸಾರಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಅಂತರ್ ರಾಜ್ಯ ಮತ್ತು ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ೫೮ ಮಂದಿಯ ಸೊಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. 895 ಮಂದಿಯ ವರದಿ ಬರಲು ಬಾಕಿಯಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 99 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 103 ಮಂದಿ ಗುಣಮುಖಗೊಂಡಿದ್ದಾರೆ.
99 ಮಂದಿಗೂ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4193 ಕ್ಕೆ ತಲುಪಿದೆ. ಪ್ರಸ್ತುತ 1079 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3083 ಮಂದಿ ಗುಣಮುಖರಾಗಿದ್ದಾರೆ.
Click this button or press Ctrl+G to toggle between Kannada and English