ಶೀಘ್ರವೇ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ : ಸಚಿವ ಡಾ. ನಾರಾಯಣ ಗೌಡ

12:05 AM, Thursday, August 27th, 2020
Share
1 Star2 Stars3 Stars4 Stars5 Stars
(No Ratings Yet)
Loading...

Narayana Gowdaಬಂಟ್ವಾಳ : ಪುರಸಭೆಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೀಡಿದ ಸಲಹೆಯನ್ನು ಗಮನದಲ್ಲಿರಿಸಲಾಗಿದೆ. ಪುರಸಭೆಯಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ಹಿರಿಯ ಸದಸ್ಯ ಎ. ಗೋವಿಂದ ಪ್ರಭು ಗಮನ ಸೆಳೆದಿದ್ದು, ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಹೇಳಿದರು.

ಬುಧವಾರ ಸಂಜೆ ಬಂಟ್ವಾಳಕ್ಕೆ ಭೇಟಿ ನೀಡಿದ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.  ಮುಂದೆ ಯಾರೂ ಕೂಡ ಸರ್ಕಾರದ ಮೀಸಲಾತಿಯನ್ನು ಪ್ರಶ್ನಿಸದಂತೆ ಮುಖ್ಯಮಂತ್ರಿ ಕ್ಯಾಬಿನೆಟ್ ಉಪಸಮಿತಿಯನ್ನು ಮಾಡಿ, ಅದರ ನಿರ್ಣಯವನ್ನು ಹೈಕೋರ್ಟ್ಗೆ ಸಲ್ಲಿಸಲಾಗಿದೆ. ಶೀಘ್ರವೇ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.

ಬಂಟ್ವಾಳ ಪುರಸಭೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡುವುದರ ಮೂಲಕ ಆಡಳಿತ ಯಂತ್ರ ಚುರುಕಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇನ್ನು,  ಕೊರೊನಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರಯತ್ನಗಳು ಸಾಗಿದ್ದು, ಈ ವೇಳೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಆಡಳಿತ ಕೆಲಸ ಮಾಡುತ್ತಿದೆ ಎಂದರು.

ಸ್ಪೋರ್ಟ್ಸ್ ಕಾಂಪ್ಲೆಕ್ಸ್ಗೆ ತೋಟಗಾರಿಕಾ ಇಲಾಖೆಯಿಂದ ಜಮೀನು ಗುರುತಿಸುವ ಕಾರ್ಯ ನಡೆಯುತ್ತಿದೆ. ಅಡಿಕೆ ಬೆಳೆ ಸಹಿತ ಪ್ರಾಕೃತಿಕ ವಿಕೋಪವುಂಟಾದಾಗ ತೋಟಗಾರಿಕೆ ಬೆಳೆಗಳಿಗೆ ದೊರಕುವ ಪರಿಹಾರ ಮೊತ್ತ ಏರಿಸುವ ಕುರಿತು ಗಮನಹರಿಸುವುದಾಗಿ ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English