ಮಂಗಳೂರು : ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ 2009 ರಲ್ಲಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಕರಾವಳಿ ಕಾವಲು ಪಡೆಯ ಇನ್‌ಸ್ಪೆಕ್ಟರ್ ಗಂಗಿರೆಡ್ಡಿ ಅವರನ್ನು ಮಂಗಳೂರು ಲೋಕಾಯುಕ್ತ ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ ದಂಡ ವಿಧಿಸಿ ಆ.27ರಂದು ಆದೇಶ ನೀಡಿದೆ.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಿಸಿದೆ.
ಶಿಕ್ಷೆಯ ಪ್ರಮಾಣ ಘೋಷಿಸಿದ ತಕ್ಷಣ ನ್ಯಾಯಾಧೀಶರು ಗಂಗೀರೆಡ್ಡಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆಗಿನ ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ 2009 ರಲ್ಲಿ ಗಂಗಿ ರೆಡ್ಡಿ ಮನೆ ಮೇಲೆ ದಾಳಿ ನಡೆಸಿ ಕೇಸು ದಾಖಲಿಸಿ ಹಲವು ದಾಖಲೆಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು ಹತ್ತೊಂಬತ್ತು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿ.ವೈ. ಎಸ್.ಪಿ. ಆಗಿದ್ದ ಎಮ್. ವಿಟ್ಟಲ್ ದಾಸ್ ಪೈ ಆರೋಪಿ ಗಂಗಿ ರೆಡ್ಡಿ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರಿಂದ ಶಿಕ್ಷೆ ಪ್ರಕಟಿಸಿದ್ದು, ನ್ಯಾಯಾಧೀಶ ರಿಂದ 111 ಪುಟಗಳ ಸುದೀರ್ಘ ಆದೇಶದನ್ವಯ ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಅಡಿ ಯಲ್ಲಿ ಆರೋಪಿ ಗಂಗಿ ರೆಡ್ಡಿ ಅಪರಾಧ ಎಸಗಿದ್ದಾರೆಂದು ಸಾಭೀತಾಗಿದ್ದು, ಆಪರಾಧಿಗೆ 4 ವರ್ಷ ಸಾದಾ ಸಜೆ ಮತ್ತು ರೂ 5,00,000 ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ಎಂದು ಘೋಷಿಸಿದ್ದಾರೆ.
Click this button or press Ctrl+G to toggle between Kannada and English