ಶಿವಮೊಗ್ಗ : ಬಿಜೆಪಿ ಮುಖಂಡ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಚಿವರ ಮನೆಯ ಸದಸ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವರು ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿಯಲ್ಲಿ ಸಚಿವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಹಿಂದೆ ನಡೆಸಿದ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು ಈ ಬಾರಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಸಚಿವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
Click this button or press Ctrl+G to toggle between Kannada and English