ಬಿ.ಸಿ.ರೋಡು-ಪುಂಜಾಲಕಟ್ಟೆಯಲ್ಲಿ ಹೆದ್ದಾರಿಗೆ ಕುಸಿಯುತ್ತಿರುವ ಗುಡ್ಡಗಳು

5:10 PM, Wednesday, September 2nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

poonjalakatte Roadಬಂಟ್ವಾಳ : ಬಿ.ಸಿ.ರೋಡು-ಪುಂಜಾಲಕಟ್ಟೆ 19.85 ಕಿ.ಮೀ.ಹೆದ್ದಾರಿ ಅಭಿವೃದ್ಧಿಗಾಗಿ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಭೂಸ್ವಾಧೀನ ಪಡಿಸಲಾದ ಪ್ರದೇಶಗಳನ್ನು ಅಗೆದು ರಸ್ತೆ ನಿರ್ಮಿಸಲಾದ ನಾವೂರು ಗ್ರಾಮದ ಬಡಗುಂಡಿ ಪ್ರದೇಶಗಳಲ್ಲಿ ಹೆದ್ದಾರಿ ಸುಮಾರು 50 ಅಡಿ ಎತ್ತರದ ಗುಡ್ಡಗಳು ಕುಸಿಯಲಾರಂಭಿಸಿದೆ.

ಹೆದ್ದಾರಿಯಲ್ಲಿ ಧರ್ಮಸ್ಥಳ ಭಾಗಕ್ಕೆ ತೆರಳುವ ಬಸ್ಸುಗಳು ಸೇರಿದಂತೆ ಸಾವಿರಾರು ವಾಹನಗಳು ರಾತ್ರಿ-ಹಗಲು ಸಂಚರಿಸುತ್ತಿದ್ದು, ಒಂದು ವೇಳೆ ವಾಹನಗಳು ಸಾಗುವ ವೇಳೆ ಈ ಗುಡ್ಡ ಕುಸಿತವಾದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಗುಡ್ಡದ ಮೇಲ್ಭಾಗದಲ್ಲಿ ಬೃಹತ್ ಗಾತ್ರದ ಮರಗಳು ಕೂಡ ಇದ್ದು, ಮಳೆಯ ಕಾರಣದಿಂದ ಮರಗಳು ಸಹಿತ ಗುಡ್ಡ ಕುಸಿದರೆ ಹೆದ್ದಾರಿ ಸಂಚಾರ ಸ್ಥಗಿತಗೊಳ್ಳಬಹುದು.

ನಾವೂರು ಗ್ರಾಮದ ಬಡಗುಂಡಿ ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಕಡೆ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಇನ್ನು ಕೆಲವೆಡೆ ಗುಡ್ಡ ಪೂರ್ಣ ಪ್ರಮಾಣದಲ್ಲಿ ಬಿರುಕು ಬಿಟ್ಟಿದೆ. ರಸ್ತೆಗೆ ಕುಸಿದಿರುವ ಭಾಗಗಳಲ್ಲಿ ವಾಹನಗಳು ಆಭಾಗಕ್ಕೆ ತೆರಳದಂತೆ ಬ್ಯಾರಿಕೇಡ್‌ಗಳನ್ನೂ ಇಡಲಾಗಿದೆ.

ಕಾಮಗಾರಿ ನಡೆಯುವ ಸಂದರ್ಭದಲ್ಲಿ ತೆರಳುಗೊಳಿಸಲಾದ ವಿದ್ಯುತ್ ಕಂಬಗಳನ್ನು ಗುಡ್ಡ ಅಗೆದ ಬಳಿಕ ಸರತಿಯಲ್ಲಿ ಹಾಕಲಾಗಿದ್ದು, ಪ್ರಸ್ತುತ ಕಂಬಗಳು ಗುಡ್ಡದ ಬುಡದಲ್ಲೇ ಇವೆ. ಗುಡ್ಡ ಮಣ್ಣು ಕುಸಿದರೆ ಈ ವಿದ್ಯುತ್ ಕಂಬಗಳು, ತಂತಿಗಳ ಮೇಲೆಯೇ ಬೀಳಲಿದ್ದು, ಪರಿಣಾಮ ಲಕ್ಷಾಂತರ ರೂ.ನಷ್ಟ ಸಂಭವಿಸಲಿದೆ. ಗುಡ್ಡದಿಂದ ಕನಿಷ್ಟ ಒಂದು ಮರ ತಂತಿಯ ಮೇಲೆ ಬಿದ್ದರೂ, ಹತ್ತಾರು ಕಂಬಗಳು ಧರೆಗುರುಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English