ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣ ಕಿತ್ತು ಹಾಕಬೇಕು : ಎಬಿವಿಪಿ

9:04 PM, Thursday, September 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Abvp  protest ಮಂಗಳೂರು :  ಸ್ಯಾಂಡಲವುಡ್ ನೊಂದಿಗೆ ನಂಟಿರುವ ಬೃಹತ್ ಡ್ರಗ್ಸ್ ಜಾಲವನ್ನು ಎನ್‌ಸಿಬಿ ಅಧಿಕಾರಿಗಳು ಭೇದಿಸಿರುವ ಬಗ್ಗೆ ಮತ್ತು ಡ್ರಗ್ಸ್ ಜಾಲದ ಹಿಂದೆ ಸಮಾಜದಲ್ಲಿ ಇರುವಂಥ ಪ್ರತಿಷ್ಠಿತ ಪ್ರಭಾವಿ ಶ್ರೀಮಂತ ಕುಟುಂಬಗಳ ವ್ಯಕ್ತಿಗಳು, ಸಿನಿಮಾ ನಟ, ನಟಿಯರು, ರಾಜಕಾರಣಿಗಳ ಮಕ್ಕಳು ಇರುವ ಮಾಹಿತಿಗಳು  ಈಗ ಜಗಜ್ಜಾಹೀರಾಗಿದೆ.  ಸಮಾಜಕ್ಕೆ ಮಾದರಿ ಆಗಬೇಕಾದವರೆಲ್ಲ ಇಂತಹ ಚಟಗಳಿಗೆ ಅಂಟಿಕೊಂಡಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಡ್ರಗ್ಸ್ ಜಾಲದ ಪಿಡುಗಿನಿಂದ ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಬುಡಸಮೇತ ಕಿತ್ತು ಹಾಕಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಕ್ತಿಮೀರಿ ಕೆಲಸ ಮಾಡಬೇಕಾಗಿದೆ. ರಾಜ್ಯ ಸರ್ಕಾರ ಡ್ರಗ್ಸ್ ನಿಯಂತ್ರಣಕ್ಕೆ ಕಠಿಣವಾದ ಕಾನೂನುಗಳನ್ನು ರೂಪಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡು ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಬೇಕಾಗಿದೆ ಎಂದು ಎಬಿವಿಪಿ ಒತ್ತಾಯಿಸಿದೆ.

ನಗರದ ಕ್ಲಾಕ್ ಟವರ್ ಬಳಿ  ಡ್ರಗ್ ಮಾಫಿಯಾದ ವಿರುದ್ಧ ಗುರುವಾರ  ಎಬಿವಿಪಿ ಇಂದು ಪ್ರತಿಭಟನೆ ನಡೆಸಿದೆ.

ಮಾದಕ ವಸ್ತುಗಳು ಸಮಾಜಕ್ಕೆ ಅತ್ಯಂತ ಹಾನಿಕಾರಕ ಆಗಿವೆ. ಈ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾದವರು ಸ್ವತಃ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುವುದಲ್ಲದೇ, ಸಮಾಜದ ಸ್ವಾಸ್ಥ್ಯವನ್ನು ಕೂಡ ಹಾಳು ಮಾಡುತ್ತೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  2014 ರಲ್ಲಿ ಶಾಲಾ – ಕಾಲೇಜು ಕ್ಯಾಂಪಸ್ ಗಳಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಡೀ ದೇಶ್ಯಾದ್ಯಂತ ನಶಾಮುಕ್ತ ಭಾರತ ಎಂಬ ಅಭಿಯಾನವನ್ನು ಹಮ್ಮಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕ್ಯಾಂಪಸ್‌ಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗ್ರತಿಯನ್ನು ಮೂಡಿಸಿತ್ತು. ಆದರೆ ಇತ್ತೀಚಿಗೆ ಪೊಲೀಸರ ತನಿಖೆಯಲ್ಲಿ ಬೆಚ್ಚಿ ಬೀಳಿಸುವ ಹಲವು ಮಾಹಿತಿಗಳು ಹೊರಬಿದ್ದ ವಿಷಯ  ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು ಮಾದಕ ವ್ಯಸನ ಜಾಲದ ಗ್ರಾಹಕರಾಗಿದ್ದಾರೆ ಎಂಬ ಅಘಾತಕಾರಿ ಅಂಶಗಳು ಕೇಳಿಬರುತ್ತಿರುವುದು ವಿಷಾದನೀಯ.

ರಾಜ್ಯದ ಹಲವು ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕೋಡ್ ವರ್ಡ್‌ಗಳ ಮೂಲಕ ಈ ದಂಧೆ ನಡೆಸುತ್ತಿದೆ ಮತ್ತು ಇದರಿಂದ ಕಾಲೇಜುಗಳಲ್ಲಿ ಡ್ರಗ್ ಅಡಿಕ್ಟ್ ಆಗುವುದು ಒಂದು ರೀತಿಯಲ್ಲಿ ಫ್ಯಾಶನ್ ಆಗಿ ಮಾರ್ಪಡುತ್ತಿರುವ ಅಂಶವೂ ಬಯಲಾಗುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು  ಎಚ್ಚರಿಕೆಯನ್ನು ವಹಿಸಿಕೊಳ್ಳಬೇಕಾಗಿದೆ. ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ಕಣ್ಣಿಡಬೇಕಾಗಿದೆ ಹಾಗೂ ಅವರ ಜೊತೆಗೆ ಮುಕ್ತವಾಗಿ ಮಾತನಾಡಬೇಕಾಗಿದೆ ಎಂದು ಪೋ?ಕರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿ?ತ್ ಮನವಿ ಮಾಡಿಕೊಳ್ಳುತ್ತೆ. ಬೆಂಗಳೂರಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸ್ ಇಲಾಖೆ ತನಿಖೆಯನ್ನು ಮತ್ತ? ಚುರುಕುಗೊಳಿಸಬೇಕಾಗಿದೆ ಮತ್ತು ಈ ಜಾಲದಲ್ಲಿ ಪ್ರಭಾವಿಗಳ ಹಸ್ತಕ್ಷೇಪ ಇರುವುದರಿಂದ ಯಾವುದೇ ಒತ್ತಡಕ್ಕೆ ಮಣಿಯದೆ ಗೃಹ ಇಲಾಖೆ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ರಾಜ್ಯ ಸರಕಾರಕ್ಕೆ ಆಗ್ರಹಿಸುತ್ತದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಗಣ್ಯರು ಮತ್ತು ಪ್ರಭಾವಿಗಳು ಈ ಡ್ರಗ್ಸ್ ಜಾಲದ ವಿರುದ್ಧ ಧ್ವನಿಯೆತ್ತಬೇಕು ಮತ್ತು ಎಬಿವಿಪಿ ನಡೆಸುವ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದೆ.

ಪ್ರತಿಭಟನೆಯಲ್ಲಿ ಸಂದೇಶ ರೈ, ರಾಜ್ಯ ಸಹ ಕಾರ್ಯದರ್ಶಿ, ಶ್ರೇಯಸ್ ಶೆಟ್ಟಿ, ಅಕ್ಷಯ್ ಕಾಮಾಜೆ, ಆತ್ಮೀಕಾ ಮುಂತಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English