ಡ್ರಗ್ ಜಿಹಾದ್ : ಡ್ರಗ್ ಮಾಫೀಯಾದಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆ ಕೈವಾಡ ಇದೆ

11:14 PM, Thursday, September 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Drug Jihadದಾವಣಗೆರೆ: ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಕಾಂಗ್ರೆಸ್ ನಾಯಕರು ಡ್ರಗ್ ಮಾಫೀಯಾ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನೂ ಸಹ ವಿಚಾರಣೆಗೊಳಪಡಿಸಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಡ್ರಗ್ ಮಾಫೀಯಾದಲ್ಲಿ ರಾಜಕಾರಣಿಗಳು ಹಾಗೂ ಪೊಲೀಸ್ ಇಲಾಖೆ ಕೈವಾಡ ಇದೆ, ಪ್ರತಿಯೊಂದು ಮಾಹಿತಿ ಪೊಲೀಸರಿಗೆ ಗೊತ್ತು. ಆದರೆ ರಾಜಕಾರಣಿಗಳು ಅವರ ಕೈ ಕಟ್ಟಿಹಾಕಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ ಸಾವಿಗೆ ಡ್ರಗ್ಸ್ ಕಾರಣವಾಗಿದ್ದು, ರಾಕೇಶ್ ಡ್ರಗ್ಸ್ ಸೇವಿಸುತ್ತಿದ್ದರು. ಮುಸ್ಲಿಂರ ಹೆಸರಿನಲ್ಲಿ ಡ್ರಗ್ ಜಿಹಾದ್ ಹುಟ್ಟಿಕೊಂಡಿದೆ. ಬೇಹುಗಾರಿಕೆ ಇಲಾಖೆ ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದೆ. ಜೊತೆಗೆ, ಎಲ್ಲಾ ಮೂರು ಪಕ್ಷಗಳು ಇದರಲ್ಲಿ ಶಾಮೀಲಾಗಿವೆ ಎಂದು ಗಂಭೀರ ಆರೋಪ ಮಾಡಿದರು.

2009ರ ಮಂಗಳೂರು ಪಬ್ ಗಲಾಟೆ ನಡೆದ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ನನ್ನನ್ನು ಮಾತ್ರ ಟಾರ್ಗೆಟ್ ಮಾಡಿ 15 ದಿನ ಜೈಲಿಗೆ ಕಳಿಸಿತ್ತು. ಡ್ರಗ್ ದಂಧೆಯ ಬಗ್ಗೆ ಟಾರ್ಗೆಟ್ ಮಾಡಲೇ ಇಲ್ಲ. ಆಗ ಪಬ್ ಗಳಲ್ಲಿ ಡ್ರಗ್ ಇತರೆ ಮಾಫಿಯಾ ನಡೆಯುತ್ತಿದೆ ಎಂದು ಕೂಗಾಡಿದರೂ ಸರ್ಕಾರ ನನ್ನ ಮಾತನ್ನು ಕೇಳಲಿಲ್ಲ. ಅದರ ಫಲವೇ ಈಗ ನೋಡುತ್ತಿದ್ದೇವೆ ಎಂದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English