ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶಕ್ಕೆ ಪಡೆದಿದೆ.
ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ ಅವರ ಯಲಹಂಕದ
ಜ್ಯುಡಿಷಿನಲ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಸತತ 3 ಗಂಟೆ ಶೋಧ ಕಾರ್ಯ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Click this button or press Ctrl+G to toggle between Kannada and English