- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದ ನಟಿ ವಿರುದ್ಧ ಎಫ್‍ಐಆರ್

niveditha [1]ಬೆಂಗಳೂರು :  ಗಾಂಜಾ ತುಳಸಿ ಗಿಡ ಇದ್ದಂತೆ ಎಂದು ವಿವಾದಿತ ಹೇಳಿಕೆ ನೀಡಿದ್ದ ನಟಿ ನಿವೇದಿತಾ ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ.

ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದು ನಿವೇದಿತಾ ಹೇಳಿದ್ದರು. ಈ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಎ.ದೀಪಕ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರು ಆಧರಿಸಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.