- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಸೋಂಕು : ದಕ್ಷಿಣ ಕನ್ನಡ 428, ಉಡುಪಿ 186 , ಕಾಸರಗೋಡು 236

corona [1]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ  428 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾಗೆ 7 ಮಂದಿ ಸಾವನ್ನಪ್ಪಿದ್ದಾರೆ.

ಕೊರೊನಾದಿಂದ ಮೃತಪಟ್ಟ 7 ಮಂದಿಯಲ್ಲಿ 4 ಮಂದಿ ಮಂಗಳೂರು ತಾಲೂಕು, ಒಬ್ಬರು ಪುತ್ತೂರು ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವ ರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 391ಕ್ಕೆ ಏರಿಕೆಯಾಗಿದೆ.

ಮಂಗಳೂರು ತಾಲೂಕಿನ 222 ಮಂದಿ, ಬಂಟ್ವಾಳ ತಾಲೂಕಿನ 61, ಪುತ್ತೂರು ತಾಲೂಕಿನ 54 , ಸುಳ್ಯ ತಾಲೂಕಿನ 45, ಬೆಳ್ತಂಗಡಿ ತಾಲೂಕಿನ 28 ಮತ್ತು ಹೊರಜಿಲ್ಲೆಯ 18 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು14223 ಮಂದಿಗೆ ಕೊರೊನಾ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 222 ಮಂದಿ ಗುಣಮುಖರಾಗಿದ್ದು, ಈವರೆಗೆ 10928 ಮಂದಿ ಗುಣಮುಖರಾಗಿದ್ದಾರೆ. 2904 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 186 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12329ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಪತ್ತೆಯಾದ ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕದಿಂದ 79 ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 77 ಐಎಲ್‌ಐ ಪ್ರಕರಣಗಳಾಗಿದ್ದು, ಒಬ್ಬರಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 28 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಅಂತರ್ ರಾಜ್ಯ ಪ್ರಯಾಣ ಮುಗಿಸಿಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಶುಕ್ರವಾರ  332 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.  ಜಿಲ್ಲೆಯಲ್ಲಿ ಕೊವಿಡ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ 60 ವರ್ಷದ ವ್ಯಕ್ತಿ ಹಾಗೂ ಕುಂದಾಪುರದ 50 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊವಿಡ್ ಸಾವಿನ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 11967 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರದಂದು ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಒಂದೇ ದಿನ 236 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಪ್ರಾಥಮಿಕ  ಸಂಪರ್ಕದಿಂದ 225 ಮಂದಿಗೆ ಸೋಂಕು ತಗುಲಿದೆ. ಐವರು ವಿದೇಶ ಹಾಗೂ ಆರು ಮಂದಿ ಹೊರರಾಜ್ಯಗಳಿಂದ ಬಂದವರಾಗಿದ್ದಾರೆ.

ಈ ನಡುವೆ ಶುಕ್ರವಾರದಂದು 70 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇಂದು ೨೩೬ ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಎರಡನೇ ಬಾರಿ ಸೋಂಕಿತರ ಸಂಖ್ಯೆ 200ರ ಗಡಿದಾಟಿದಂತಾಗಿದೆ.