- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ : ನಳಿನ್ ಕುಮಾರ್ ಕಟೀಲ್

Nalin Kumar [1]ಮಂಗಳೂರು : ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಸಂಸದ  ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದಾರೆ.

ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ ಎಂದು  ಅವರು ಹೇಳಿದ್ದಾರೆ

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ.

ಸ್ಯಾಂಡಲ್‍ವುಡ್‌‌ನಲ್ಲಿ ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಪೊಲೀಸರು, ನಟಿ ರಾಗಿಣಿ ದ್ವಿವೇದಿ, ಆಪ್ತ ರವಿಶಂಕರ್ ಹಾಗೂ ಸಂಜನಾ ಗಲ್ರಾನಿ ಆಪ್ತ ರಾಹುಲ್‍ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಒಟ್ಟು 12 ಜನ ಆರೋಪಿಗಳ ವಿರುದ್ದ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.