ನಿದ್ರಾವಸ್ಥೆಯಲ್ಲಿರುವ ಜನಪ್ರತಿನಿಧಿಗಳಿಂದಾಗಿ ಆದಾಯ ತೆರಿಗೆ ಕಚೇರಿ ಗೋವಾ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ : ಖಾದರ್ :

12:44 AM, Sunday, September 6th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

UT Khader ಮಂಗಳೂರು: ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ‌. ಜಿಲ್ಲೆಯಲ್ಲಿದ್ದ ಆದಾಯ ತೆರಿಗೆ ಇಲಾಖೆಯನ್ನು ಗೋವಾಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಈ ಮೂಲಕ ಅಭಿವೃದ್ಧಿ ಆಗುವ ಜಿಲ್ಲೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಬದಲು ಇನ್ನಷ್ಟು ಸಂಕಷ್ಟಕ್ಕೆ ದೂಡುವ ಸ್ಥಿತಿಯನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು,  ನಿದ್ರಾವಸ್ಥೆಯಲ್ಲಿರುವ ಜನಪ್ರತಿನಿಧಿಗಳಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆದಾಯ ತೆರಿಗೆ ಕಚೇರಿ  ಗೋವಾ ರಾಜ್ಯಕ್ಕೆ ಸ್ಥಳಾಂತರಗೊಂಡಿದೆ ಈ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆಯ ಜನತೆ ಆದಾಯ ತೆರಿಗೆ ಪಾವತಿಸಲು ಗೋವಾಕ್ಕೆ ತೆರಳಬೇಕಾದ ಪರಿಸ್ಥಿತಿ ಬಂದೊದಗಿದೆ.

ಜಿಲ್ಲೆಯಲ್ಲಿ ಹುಟ್ಟಿದ ವಿಜಯಾ ಬ್ಯಾಂಕ್ನೊಂದಿಗೆ ಸಿಂಡಿಕೇಟ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ಗಳನ್ನು ಇತರ ಬ್ಯಾಂಕ್ಗಳೊಂದಿಗೆ ವಿಲೀನ ಮಾಡಲಾಯಿತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಮಾಡುವ ಬದಲು ಅದಾನಿ ಕಂಪೆನಿಗೆ ಮಾರಿ ಖಾಸಗೀಕರಣ ಮಾಡಲಾಯಿತು. ‌ಎನ್ಎಂಪಿಟಿಯನ್ನು ಖಾಸಗೀಕರಣ ಗೊಳಿಸಲಾಗುತ್ತಿದೆ. ಇದೀಗ ಆದಾಯ ತೆರಿಗೆ ಇಲಾಖೆಯನ್ನು ಗೋವಾಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಖಾದರ್ ಹೇಳಿದರು.

ಬೆಂಗಳೂರು ಬಳಿಕ ಅತೀ ಹೆಚ್ಚು ತೆರಿಗೆ ವಿಧಿಸುವ ಜಿಲ್ಲೆ ಇದಾಗಿದೆ. ಆದರೆ, ಇಲ್ಲಿನ ಆದಾಯ ತೆರಿಗೆ ಇಲಾಖೆಯನ್ನು ಸ್ಥಳಾಂತರ ಮಾಡುವಾಗ ಕನಿಷ್ಠ ಮಾಹಿತಿಯನ್ನು ನೀಡದೇ, ಅಭಿಪ್ರಾಯ ಕೇಳದೆ ಸ್ಥಳಾಂತರ ಮಾಡಲಾಗಿದೆ.‌ ಇಷ್ಟೆಲ್ಲಾ ಆದರೂ ಮೂರೂ ಜಿಲ್ಲೆಗಳ ಸಂಸದರು ಯಾವುದೇ ಮಾತನಾಡುತ್ತಿಲ್ಲ ಈ ಕುರಿತು ಮೂರು ಜಿಲ್ಲೆಯ ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದರು.

ಹುಬ್ಬಳ್ಳಿಯಲ್ಲಿ ಇದೇ ರೀತಿ ಸ್ಥಳಾಂತರ ಆಗಿರುವ ಆದಾಯ ಇಲಾಖೆಯನ್ನು ಎಲ್ಲಾ ಶಾಸಕರು ಸಂಸದರು ಪಕ್ಷ ಬೇಧ ಮರೆತು ತಂಡವಾಗಿ ಹೋಗಿ ನಿಲ್ಲಿಸಿದ್ದಾರೆ. ಅವರಿಗೆ ಆ ಶಕ್ತಿ ಇರುವಾಗ, ಇಲ್ಲಿನವರಿಗೆ ಯಾಕೆ ಸಾಧ್ಯವಿಲ್ಲ ಎಂದು ಖಾದರ್ ಪ್ರಶ್ನಿಸಿದರು.

ನನ್ನನ್ನು ಹೊರತುಪಡಿಸಿ ಉಡುಪಿ, ಕಾರವಾರ, ದ.ಕ.ಜಿಲ್ಲೆಯಲ್ಲಿ ಎಲ್ಲರೂ ಬಿಜೆಪಿ ಶಾಸಕರೇ ಇದ್ದಾರೆ. ಆದರೆ, ಯಾರೂ ಇದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಖೇದ ವ್ಯಕ್ತ ಪಡಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English