ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 326 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ ಕಂಡುಬಂದಿದೆ. ಸೋಂಕಿತರ ಸಂಪರ್ಕದಲ್ಲಿದ್ದ 34 ಮಂದಿ, ತೀವ್ರ ಉಸಿರಾಟ ತೊಂದರೆಯ 15, ಸೋಂಕು ನಿಗೂಢ ಪ್ರಕರಣದಲ್ಲಿ 109 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸೋಂಕಿತರ ಪೈಕಿ ಮಂಗಳೂರು -187, ಬಂಟ್ವಾಳ-39, ಪುತ್ತೂರು-28, ಸುಳ್ಯ-27, ಬೆಳ್ತಂಗಡಿ-33, ಹೊರಜಿಲ್ಲೆಯ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,926ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ 202 ಮಂದಿ ವಿವಿಧ ಆಸ್ಪತ್ರೆ, ಮನೆ, ಕೋವಿಡ್ ಆರೈಕೆ ಕೇಂದ್ರದಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ಮನೆಯಿಂದ 110 ಮಂದಿ, ಕೋವಿಡ್ ಆರೈಕೆ ಕೇಂದ್ರದಿಂದ ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11,441 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3084 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ರವಿವಾರ 216 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 12720ಕ್ಕೆ ಏರಿದೆ.
ಜಿಲ್ಲೆಯಲ್ಲಿ 74 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೊಂಕು ತಗುಲಿದೆ, 84 ಐಎಲ್ಐ, 11 ಸಾರಿ ಪ್ರಕರಣಗಳು ಪತ್ತೆಯಾಗಿದೆ . 40 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಸೋಂಕಿತರಲ್ಲಿ 7 ಮಂದಿ ಅಂತರ್ ರಾಜ್ಯ ಪ್ರಯಾಣದಿಂದ ಬಂದವರು.
ಉಡುಪಿಯಲ್ಲಿ ರವಿವಾರ 629 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಇನ್ನೂ 350 ಮಂದಿಯ ವರದಿ ಬರಲು ಬಾಕಿ ಇದೆ. ರವಿವಾರದಂದು 270 ಮಂದಿ ಗುಣಮುಖ ರಾಗಿದ್ದಾರೆ .ಸದ್ಯ ಉಡುಪಿಯಲ್ಲಿ 1852 ಸಕ್ರಿಯ ಪ್ರಕರಣಗಳು ಇವೆ.
ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 218 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 203 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. 112 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1601 ಮಂದಿ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 6104 ಮಂದಿ ನಿಗಾದಲ್ಲಿದ್ದು, 1114 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.
ಮೂರು ದಿನಗಳಲ್ಲಿ 730 ಮಂದಿಗೆ ಸೋಂಕು ದೃಢಪಟ್ಟಿದೆ. ಸೆ. 4 ರಂದು 236, ಸೆ. 5 ರಂದು 276 , ಸೆ.6 ರಂದು 218 ಮಂದಿಗೆ ಸೋಂಕು ಪತ್ತೆಯಾಗಿದೆ.
Click this button or press Ctrl+G to toggle between Kannada and English