ಮಂಗಳೂರು, : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ಬೆಳಿಗ್ಗೆ ಕುಂಟಿಕಾನದ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದಿದ್ದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ.
ತಡೆಗೋಡೆಯ ಒಂದು ಭಾಗದ ಗೋಡೆ ಕುಸಿದು ಹಿಂಬದಿಯ ಹಾಸ್ಟೆಲ್ ಆವರಣದೊಳಗೆ ಮಣ್ಣು ರಾಶಿ ಬಿದಿದೆ. ಇದೀಗ ಮತ್ತೊಂದು ಭಾಗದ ಗೋಡೆಯು ಕೂಡಾ ಕುಸಿಯುವ ಆತಂಕ ಸೃಷ್ಟಿಯಾಗಿದ್ದು ಈ ಹಿನ್ನೆಲೆ ಇನ್ನೂ ಕೂಡಾ ಕಾರ್ಯಾಚರಣೆ ಆರಂಭವಾಗಿಲ್ಲ ಎಂದು ಹೇಳಲಾಗಿದೆ.
ಅಗ್ನಿ ಶಾಮಕ ದಳ, ಸ್ಥಳೀಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Click this button or press Ctrl+G to toggle between Kannada and English