ಮಂಗಳೂರು : ಕರ್ನಾಟಕ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮನು ಬಳಿಗಾರ್ ರವರ ಅಧಿಕಾರ ಅವಧಿಯು ಈಗಾಗಲೇ ಮುಗಿದಿದ್ದು ತಕ್ಷಣಕ್ಕೆ ಪದತ್ಯುತಗೊಳಿಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಗಡಿನಾಡು ಕಾಸರಗೋಡಿನ ಕನ್ನಡ ಹೋರಾಟಗಾರ ಜಿ ವೀರೇಶ್ವರ ಭಟ್ ಕರ್ಮರ್ಕರ್ ಒತ್ತಾಯಿಸಿದ್ದಾರೆ.
ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಸರಗೋಡಿನ ಕನ್ನಡಿಗರಿಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ಬೆಂಬಲಿಸಬೇಕು, ಕನ್ನಡಿಗರ ಮೇಲೆ ದೌರ್ಜನ್ಯ ವನ್ನು ನಿಲ್ಲಿಸಬೇಕು, ಕಾಸರಗೋಡಿನ ಕನ್ನಡಿಗರಿಗೆ ಕರ್ನಾಟಕದಲ್ಲಿ ಕಡ್ಡಾಯವಾಗಿ ಉದ್ಯೋಗ ಮೀಸಲಾತಿ ಒದಗಿಸಬೇಕಿದೆ. ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಅನಿವಾರ್ಯವಾಗಿ ಕೇರಳದ ಕನ್ನಡ ಶಾಲೆಗಳಲ್ಲಿ ಸೇವೆ ಮುಂದುವರಿಸಿ ನಿವೃತ್ತರಾದವರಿಗೆ ಪಿಂಚಣಿ ಜಾರಿ ಮಾಡುವಾಗ ಕರ್ನಾಟಕದ ಸೇವೆಯನ್ನು ಪರಿಗಣಿಸಬೇಕು ಹಾಗೂ ಕಾಸರಗೋಡಿನ ಕನ್ನಡಿಗರಿಗೂ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಮತದಾನಕ್ಕೆ ಕಾಸರಗೋಡಿಮ ಮಂಜೇಶ್ವರದಲ್ಲಿ ಅಥವಾ ಮಂಗಳೂರಿನಲ್ಲಿ ವ್ಯವಸ್ಥೆ ಮಾಡಬೇಕು, ಎಂದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು, ವಸಂತ್ ಕುಮಾರ್ ಪೆರ್ಲ, ಶಿವರಾಮ ಭಟ್ ಸರವು ಕಾಸರಗೋಡು, ಉಪಸ್ಥಿತರಿದ್ದರು.
Click this button or press Ctrl+G to toggle between Kannada and English