ಸುರಿಯುತ್ತಿರುವ ಭಾರೀ ಮಳೆಗೆ ಒಮ್ನಿ ಕಾರಿನ ಮೇಲೆ ಮುರಿದು ಬಿದ್ದ ಮರ

8:59 PM, Saturday, September 12th, 2020
Share
1 Star2 Stars3 Stars4 Stars5 Stars
(No Ratings Yet)
Loading...

omni carಕಡಬ :  ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಚಲಿಸುತ್ತಿದ್ದ ಒಮ್ನಿ ಕಾರಿನ ಮೇಲೆ ಮರ ಮುರಿದು ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದುಬಿದ್ದಿದೆ. ಕೊಯಿಲದಿಂದ ಆತೂರಿಗೆ ಯೋಗೀಶ್ ಎಂಬ‌ುವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಾರಿನ ಮೇಲೆ ಮರ ಮುರಿದು ಬಿದ್ದಿದೆ.

ಮರ ರಸ್ತೆಗೆ ಮುರಿದು ಬಿದ್ದ ಪರಿಣಾಮ ಸುಮಾರು ಅರ್ಧತಾಸು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿ ಸೇರಿದಂತೆ ಹಲವು ಕಡೆಗಳಲ್ಲಿ ರಸ್ತೆಯ ಪಕ್ಕದಲ್ಲಿ ಸಾಕಷ್ಟು ಅಪಾಯಕಾರಿ ಮರಗಳಿದ್ದು ಕೆಲವೊಂದು ಮರಗಳು ಮುರಿದು ಬೀಳುವ ಹಂತದಲ್ಲಿವೆ. ರಸ್ತೆ ಬದಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವ ಮೂಲಕ ಮುಂದೆ ಸಂಭವಿಸಬಹುದಾದ ಅನಾಹುತ ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಒಮ್ನಿ ಜಖಂಗೊಂಡಿದ್ದು, ಚಾಲಕ ಯೋಗೀಶ್‌ ಸಣ್ಣ-ಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English