ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ಸೋಮವಾರದಿಂದ ಆರಂಭವಾಗಲಿದೆ.
ಕೊರೊನಾ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತಾಧಿಕಾರಿ ತಿಳಿಸಿದ್ದಾರೆ.
ದೇಗುಲವು ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುತ್ತಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಿಸಲಾಗುತ್ತದೆ. ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Click this button or press Ctrl+G to toggle between Kannada and English