ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ನೇಮಕ

1:23 PM, Tuesday, September 15th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Rashmiಬಂಟ್ವಾಳ :  ಪ್ರಸಿದ್ಧ ಕಾರಣಿಕ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.

ಕಳೆದ ಒಂದುವರೆ ವರ್ಷಗಳಿಂದ ಬಂಟ್ವಾಳ ತಾಲೂಕಿನ ತಹಶಿಲ್ದಾರ್ ಆಗಿದ್ದು ಕೊಂಡು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಿ ದಕ್ಷ ಅಧಿಕಾರಿ ಎಂಬ ಹೆಗ್ಗಳಿಕೆಗೆ ರಶ್ಮಿ ಪಾತ್ರರಾಗಿದ್ದಾರೆ. ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ.

ನೆರೆ ಬಂದ ಸಂದರ್ಭ ರಾತ್ರೋ ರಾತ್ರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಗಡಿ ಬಂದ್ ಆದಂತಹ ಸಂದರ್ಭದಲ್ಲಿ ಗಡಿ ಪ್ರದೇಶಗಳ ಜನತೆಯನ್ನು ಮನವರಿಕೆ ಮಾಡಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮ ಹೀಗೆ ಹತ್ತು ಹಲವು ರೀತಿಯಲ್ಲಿ ದಕ್ಷ ಅಧಿಕಾರಿ ರಶ್ಮಿ ಅವರು ತಮ್ಮ ಸೇವೆ ಸಲ್ಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English