ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಶಾಲಾ ಕಾಲೇಜು ಸಮೀಪ ತಂಬಾಕು ಮಾರಾಟ – ಕಠಿಣ ಕ್ರಮ

1:40 PM, Thursday, September 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

tobaco ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಶಾಲಾ ಕಾಲೇಜು ಆವರಣಗಳಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ, ಮಾರಾಟ ಮಾಡುವ ಪ್ರಕರಣ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಹೇಳಿದರು.

ಅವರು ಮಂಗಳವಾರ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಕೋಟ್ಪಾ-2003 ಕಾಯ್ದೆಯ ಅನುಷ್ಠಾನ ಮತ್ತು ತಂಬಾಕು ಮಾರಾಟಗಾರಿಗೆ ಪ್ರತ್ಯೇಕ ವ್ಯಾಪಾರ ಪರವಾನಗಿ ಅವಕಾಶ ಮತ್ತು ಪ್ರಯೋಜನಗಳು ಎಂಬ ವಿಷಯದ ಕುರಿತು ವರ್ಚುವಲ್ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು.
ಈಗಾಗಲೇ ಪಾಲಿಕೆ ವ್ಯಾಪ್ತಿಯ ಪ್ರತೀ ವಾರ್ಡ್‍ನಲ್ಲಿ ತಂಬಾಕು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಯಂತ್ರಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದು, ಶಾಲಾ ಕಾಲೇಜಗಳಿಂದ 100 ಮೀಟರ್ ಅಂತರದಲ್ಲಿ ತಂಬಾಕು, ಗುಟ್ಕಾ ಮಾರಾಟ ಮಾಡುವುದು ಹಾಗೂ ಸೇವನೆ ಮಾಡುವುದನ್ನು ನಿಷೇಧಿಸಲಾಗಿದೆ, ತಪ್ಪಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಂಡು ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದರು.

tobaco ದೆಹಲಿಯ ತಂಬಾಕು ನಿಯಂತ್ರಣದ ಸೀನಿಯರ್ ಟೆಕ್ನಿಕಲ್ ಅಡ್ವೈಸರ್ ಡಾ. ಶ್ರೀನಿಧಿ ಮಾತನಾಡಿ, ಮಹಾನಗರ ಪಾಲಿಕೆಗಳು ವ್ಯಾಪಾರದ ಪರವಾನಗಿ ನೀಡುವಾಗ ಕೋಟ್ಪಾ ಕಾಯ್ದೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಕಾನೂನು ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿರುವುದು ಕಂಡುಬಂದರೆ ಅಧಿಕಾರಿಗಳು ತಕ್ಷಣ ನಿಗಧಿತ ದಂಡ ವಿಧಿಸಬೇಕು. ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುವುದು ಕಂಡುಬಂದರೆ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಬೇಕು.

ತಂಬಾಕು ಮಾನವನ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಯಂತ್ರಣ ಹಾಕುವ ಕೋಟ್ಪಾ ಕಾಯ್ದೆ ಯಶಸ್ವಿಯಾಗಿ ಅನುಷ್ಠಾನ ಆಗಬೇಕು. ಅಂಗಡಿ ಮುಗ್ಗಟ್ಟು, ಹೊಟೇಲ್, ಪಾರ್ಕ್, ಚಿತ್ರಮಂದಿರ, ಆಸ್ಪತ್ರೆ, ಕಚೇರಿ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧ ನಾಮಫಲಕಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಾಧಿಕಾರಿ ಡಾ. ಜಗದೀಶ್, ಪರಿಸರ ಅಭಿಯಂತರ ಮಧು ಎಸ್. ಎಮ್. ಮತ್ತಿತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English