ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಕಟೌಟ್ ತೆರವುಗೊಳಿಸಲು ಸೂಚನೆ

11:36 PM, Thursday, September 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

banner ಮಂಗಳೂರು: ಸಾರ್ವಜನಿಕರಿಂದ ಅನೇಕ ದೂರುಗಳು ಬಂದ  ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಫ್ಲೆಕ್ಸ್, ಬ್ಯಾನರನ್ನು ತೆರವುಗೊಳಿಸುವಂತೆ  ಮೇಯರ್ ದಿವಾಕರ್ ಪಾಂಡೇಶ್ವರ್ ಅವರು ವಿನಂತಿಸಿದ್ದಾರೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾರ್ವಜನಿಕ ಸಂಬಂಧಿತ ಅನಧಿಕೃತ ಕಟೌಟ್, ಫ್ಲೆಕ್ಸ್ ಗಳನ್ನು ಮುಂದಿನ ಮೂರು ದಿನಗಳೊಳಗಾಗಿ ತೆರವುಗೊಳಿಸುವಂತೆ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್ ಅಳವಡಿಕೆಗೆ ಮಂಗಳೂರು ಮಹಾನಗರ ಪಾಲಿಕೆಯ ಅನುಮತಿ ಕಡ್ಡಾಯವಾಗಿದೆ. ಈ ಸೂಚನೆ ತಪ್ಪಿದಲ್ಲಿ ಮಹಾನಗರ ಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಲಾಗುವುದು ಹಾಗೂ ಪಾಲಿಕೆಯಿಂದ ವಶಪಡಿಸಲಾದ ಫ್ಲೆಕ್ಸ್ ಮತ್ತು ಫ್ರೇಮ್ ಗಳನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಮೇಯರ್ ದಿವಾಕರ್ ಪಾಂಡೇಶ್ವರ್ ತಿಳಿಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆಯಂತೆ ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಯವರು ಮೇಯರ್ ನಿರ್ಣಯಕ್ಕೆ ಸಹಮತ ವ್ಯಕ್ತ ಪಡಿಸಿದ್ದಾರೆ.

banner

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English