ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಕೊರೊನಾ ದೃಢ

12:32 PM, Friday, September 18th, 2020
Share
1 Star2 Stars3 Stars4 Stars5 Stars
(No Ratings Yet)
Loading...

umanath kotianಮಂಗಳೂರು: ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆ. ಇದಕ್ಕೆ ಮೊದಲು ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜಾ, ಅಂಗಾರ ಅವರಿಗೂ ಕೊರೊನಾ ದೃಢಪಟ್ಟಿತ್ತು. ಇದೀಗ ಉಮನಾಥ ಕೋಟ್ಯಾನ್ ಅವರಿಗೂ ಕೊರೊನಾ ದೃಢಪಟ್ಟಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English