ಉಡುಪಿಯಲ್ಲಿ ಅರ್ಧ ಕುಸಿದ ರಾಯಲ್ ಮಹಲ್‌ ಕಟ್ಟಡ, ಓರ್ವ ಮಹಿಳೆ ಗಾಯ

5:27 PM, Friday, September 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Royal Mahalಉಡುಪಿ:  ಚಿತ್ತರಂಜನ್ ಸರ್ಕಲ್ ನಲ್ಲಿರುವ ಹಳೆಯ ಬಹು ಮಹಡಿ ಕಟ್ಟಡದ ಭಾಗವೊಂದು ಧರೆಗುರುಳಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರು ಗಾಯಗೊಂಡಿದ್ದಾರೆ.

ಚಿತ್ತರಂಜನ್ ಸರ್ಕಲ್ ನಲ್ಲಿರುವ ರಾಯಲ್ ಮಹಲ್‌ ಕಟ್ಟಡವಾಗಿದ್ದು, ಇದು ಉಡುಪಿ ನಗರದ ಹಳೇಯ ಕಟ್ಟಡಗಳಲ್ಲಿ ಒಂದಾಗಿದೆ. ಈ ಹಳೆಯ ಕಟ್ಟಡದಲ್ಲಿ ಹೋಟೆಲ್, ಬೇಕರಿ, ಭಾರತೀಯ ಜನೌಷಧಿ ಕೇಂದ್ರ, ಚಿಪ್ಸ್ ಅಂಗಡಿ ಸೇರಿದಂತೆ ಐದಾರು ಅಂಗಡಿಗಳಿದ್ದವು.

ಕಟ್ಟಡದ ಒಂದು ಪಾರ್ಶ್ವ ಕುಸಿಯುತ್ತಿದ್ದಂತೆ ಜನರು ಕಟ್ಟಡದಿಂದ ದೂರ ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English