ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಮತ್ತು ಸಹಚರನನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

2:06 PM, Saturday, September 19th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

kishor Shettyಮಂಗಳೂರು: ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್,  ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ  ನೀಡಿದರು.

ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ.

ಪ್ರಕರಣದಲ್ಲಿ ಮತ್ತೋರ್ವನನ್ನು ಬಂಧಿಸಲಾಗಿದ್ದು, ಅಕೀಲ್ ನೌಶೀಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಮುಂಬೈನಿಂದ ‘ಎಂಡಿಎಂಎ’ ಎಂಬ ನಿಷೇಧಿತ ಮಾದಕ ವಸ್ತುವನ್ನು ತಂದು ಮಂಗಳೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದರು.

kishor Shetty

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English