ಕೂಳೂರು ಚರ್ಚ್‌ನ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ

5:08 PM, Saturday, September 19th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

kulooru Compoundಮಂಗಳೂರು : ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿವರುವ ಮಳೆಯ ನಡುವೆ ಮುಂಜಾಗ್ರತೆಯಿಲ್ಲದೆ ಕೆಲಸ ಕೈ ಗೊಂಡ ಪರಿಣಾಮ ಕೂಳೂರಿನ ಸೈಂಟ್ ಆ್ಯಂಟನಿ ಚರ್ಚ್‌ನ ತಡೆಗೋಡೆ ಕುಸಿದು ಕಾರ್ಮಿಕನೋರ್ವ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಶನಿವಾರ  ಬೆಳಗ್ಗೆ ನಡೆದಿದೆ.

ಮೃತರನ್ನು ನೀರುಮಾರ್ಗ ನಿವಾಸಿ ಉಮೇಶ್(37) ಎಂದು ಗುರುತಿಸಲಾಗಿದೆ. ತಡೆಗೋಡೆ ಕುಸಿದ ಸ್ಥಳದಲ್ಲೇ ಉಮೇಶ ಕೆಲಸ ಮಾಡುತ್ತಿದ್ದರೆನ್ನ ಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಮಣ್ಣಿನಡಿಗೆ ಸಿಲುಕಿದ್ದ ಉಮೇಶ್ ರನ್ನು ಮೇಲಕ್ಕೆತ್ತಿದರೂ, ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ರಕ್ಷಣಾ ಕಾರ್ಯಾಚರಣೆಯಲ್ಲಿ ಎಸಿ ಮದನ್ ಮೋಹನ್, ಸ್ಥಳೀಯ ಕಾರ್ಪೊರೇಟರ್ ಅನಿಲ್ ಕುಮಾರ್, ಅಗ್ನಿಶಾಮಕ ಸಿಬಂಧಿ, ಸ್ಥಳೀಯರು ಮೊದಲಾದವರು  ಸಹಕರಿಸಿದ್ದರು.

ಕವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

kulooru Compound

kulooru Compound

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English