- Mega Media News Kannada - https://kannada.megamedianews.com -

ಬಂಟ್ವಾಳ ತಾಲೂಕು ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಕೆ. ನಿಧನ

Radhakrishna [1]ಬಂಟ್ವಾಳ: ಇಲ್ಲಿನ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಕೆ.(50) ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ ಬಿ.ಸಿ.ರೋಡಿನಲ್ಲಿ ನಿಧನ ಹೊಂದಿದರು.

ಕಳೆದ ಒಂದೂವರೆ ವರ್ಷಗಳಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಮೂಲತಃ ಶಿರ್ತಾಡಿಯವರಾಗಿದ್ದು,ಕಂದಾಯ ಇಲಾಖೆಯಲ್ಲಿ ಸಕಲೇಶಪುರ, ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್ ಸಿ, ತಹಶೀಲ್ದಾರ್ ರಶ್ಮಿ ಎಸ್.ಆರ್. ಮೊದಲಾದವರು  ಸಂತಾಪ ಸೂಚಿಸಿದ್ದಾರೆ.