- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

ಜಗದೀಶ್ ನಾಯ್ಡು [1]ಬೆಂಗಳೂರು :  ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಜಗದೀಶ್ ನಾಯ್ಡು ಕೆಐಎಡಿಬಿ ಪ್ರಕರಣದ ಸಾಕ್ಷಿದಾರೊಬ್ಬರಿಗೆ ಗಾಂಧಿನಗರದ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.
ಲೋಕಾಯುಕ್ತ ಪೊಲೀಸರು ದಿಢೀರನೆ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಾ ಜಗದೀಶ್ ನಾಯ್ಡು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಿದೆ.
ಬುಧವಾರ ಬಿಬಿಎಂಪಿ ಸಭೆಯಲ್ಲಿ  ಜಗದೀಶ್ ನಾಯ್ಡುವನ್ನು ಅಮಾನತು ಮಾಡುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದರು. ಕೆಐಎಡಿಬಿ ಹಗರಣದಲ್ಲಿ ಸಚಿವರು ಹಾಗೂ ಪುತ್ರ ಜಗದೀಶ್ ಕಟ್ಟಾ ಷಾಮೀಲಾಗಿರುವುದಾಗಿ ಕಾಂಗ್ರೆಸ್, ಜೆಡಿಎಸ್ ಈ ಮೊದಲು ಆರೋಪಿಸಿತ್ತು.  ಹಗರಣದಲ್ಲಿ ನಾಯ್ಡು ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗದ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ ಎಂದು ಮೇಯರ್ ಕೆ.ಎಸ್.ನಟರಾಜ್  ತಿಳಿಸಿದ್ದರುದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಕಟ್ಟಾ ಸುಬ್ರಹ್ಮಣ್ಯ ತಾನು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ, ಲೋಕಾ ಯುಕ್ತರು ತನಿಖೆ ನಡೆಸುತ್ತಿದ್ದು ಸತ್ಯಾಂಶ ಹೊರಬೀಳಲಿದೆ ಎಂದರು.