ನರಗುಂದ : ನರಗುಂದ ನಗರದಲ್ಲಿನ ಬಾಬಾಸಾಹೇಬ ಭಾವೆ ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ನೂತನವಾದ ಹೈಟೆಕ್ ಲ್ಯಾಬ್, ಸುಸಜ್ಜಿತವಾದ 50 ಆಕ್ಸಿಜನ್ ಬೆಡ್ ನಿರ್ವಹಣಾ ಕೇಂದ್ರ ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಸಚಿವರು, ಕೋವಿಡ್ ಸೋಂಕು ನಿಯಂತ್ರಿಸಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಾಮಾಜಿಕ ಅಂತರ ಮಾಸ್ಕ್ ಧರಿಸುವಿಕೆಯೇ ಕೋವಿಡ್ ತಡೆಗಟ್ಟಲು ಸೂಕ್ತ ಮಾರ್ಗ. ಈ ನಿಟ್ಟಿನಲ್ಲಿ ಜನರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸಾರ್ವಜನಿಕರು ಸೋಂಕು ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರೇಣುಕಾ, ಆಡಳಿತಾಧಿಕಾರಿ ಡಾ. ಪ್ರವೀಣ ಮೇಟಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ನಾಗರಾಜ್ ಮೇಟಿ, ನಿಂಗಪ್ಪ ಮೇಟಿ ಹಾಜರಿದ್ದರು.
Click this button or press Ctrl+G to toggle between Kannada and English