ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಡಿಸೆಂಬರ್ 7 ರಂದು ವಿಧಾನ ಸೌಧದ ಅಪರೂಪದ ಛಾಯಾಚಿತ್ರಗಳ ಛಾಯಾಚಿತ್ರ ಪ್ರದರ್ಶನ ವಿಧಾನ ಸಭೆ-60 ನಡೆಯಿತು. ರಾಜ್ಯ ವಿಧಾನ ಸಭೆಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ವಾರ್ತಾ ಇಲಾಖೆಯ ಪ್ರಾಯೋಜಕತ್ವದಲ್ಲಿ ಈ ಪ್ರದರ್ಶನ ಏರ್ಪಡಿಸಲಾಗಿತ್ತು.
ವಿಧಾನಸೌಧ ನಿರ್ಮಾಣದಿಂದ ಹಿಡಿದು, ವಿವಿಧ ಹಂತದ ಕಾಮಗಾರಿಗಳ ಛಾಯಾಚಿತ್ರಗಳು, ವಿಧಾನ ಸೌಧ ನಿರ್ಮಾಣದ ಕಾರ್ಯನೆರವೇರಿಸಿದ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ, ರಾಜ್ಯಪಾಲ ಜಯಚಾಮರಾಜೇಂದ್ರ ಒಡೆಯರ್ ರಿಂದ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿನ ಛಾಯಾಚಿತ್ರಗಳು ಮತ್ತು 1942ರ ಪ್ರಜಾ ಪ್ರತಿನಿಧಿ ಸಭೆಯ ಅಧಿವೇಶನದಿಂದ ಹಿಡಿದು 2012 ರಲ್ಲಿ ರಾಜ್ಯದ ಪ್ರಸ್ತುತ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿನ ಛಾಯಾಚಿತ್ರಗಳು, ಇದುವರೆಗೆ ರಾಜ್ಯವನ್ನಾಳಿದ ಮುಖ್ಯಮಂತ್ರಿಗಳು, ರಾಜ್ಯಪಾಲರುಗಳು, ಹಾಗೂ ವಿಧಾನ ಸಭಾಧ್ಯಕ್ಷರುಗಳ ಭಾವಚಿತ್ರಗಳು ಹೀಗೆ ರಾಜ್ಯದ ಇತಿಹಾಸಕ್ಕೆಸಂಬಂಧಿಸಿದ, ಪ್ರಮುಖ ಘಟನೆಗಳನ್ನು ಮೆಲುಕು ಹಾಕುವ ಅಪರೂಪದ ಸುಮಾರು 250ಕ್ಕೂ ಹೆಚ್ಚಿನ ಛಾಯಾಚಿತ್ರಗಳ ಪ್ರದರ್ಶನ ನೋಡುಗರ ಮನಸೆಳೆಯುವಲ್ಲಿ ಯಶಸ್ವಿಯಾದವು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ವಿಜಯ ಪ್ರಕಾಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಹರೀಶ್ ಕುಮಾರ್ ಮತ್ತಿತರ ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English