ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ವಿಧಿವಶ

12:51 AM, Thursday, September 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

suresh-angadiಬೆಂಗಳೂರು  : ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ.

65 ವರ್ಷದ ಸುರೇಶ್ ಅಂಗಡಿ ಅವರು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2 ವಾರಗಳ ಹಿಂದೆ ಟ್ವೀಟ್ ಮಾಡಿದ್ದ ಅಂಗಡಿ ಅವರು ನಾನು ಕೊರೋನಾಗೆ ತುತ್ತಾಗಿದ್ದು ನನಗೆ ಯಾವುದೇ ರೋಗಲಕ್ಷಣಗಳು ಎಂದು ಟ್ವೀಟಿಸಿದ್ದರು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.

ಸುರೇಶ್ 1955 ಜೂನ್ 1 ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದಲ್ಲಿ ಜನಿಸಿದರು. ಅಂಗಡಿಗೆ ಮದುವೆಯಾಗಿ 2 ಹೆಣ್ಣು ಮಕ್ಕಳಿದ್ದಾರೆ.

ಸುರೇಶ್ ಅಂಗಡಿ ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದಿದ್ದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು.

ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ವಾಸವದತ್ತ ಸಿಮೆಂಟ್ಅ ನ್ನು ಯಶಸ್ವಿಯಾಗಿ ಚಾಲನೆಗೆ ತಂದು ಬೆಳಗಾವಿಯಲ್ಲೇ ಪ್ರಥಮ ಸ್ಥಾನಕ್ಕೆ ಅಂಗಡಿ ತಂದರು. ಇಂದಿಗೂ ಅವರು ತಮ್ಮ ಸಿಮೆಂಟ್ ವ್ಯವಹಾರವನ್ನು ನಡೆಸುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English