ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ ದಂಡ : ಜಿಲ್ಲಾಧಿಕಾರಿ

9:58 AM, Thursday, September 24th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

Rajendra KVಮಂಗಳೂರು: ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿ ಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸು ವುದು ಹಾಗೂ ನಿಯಮ ಉಲ್ಲಂಘನೆ ಯಾಗದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಮಾಲಕರು ಅಂಗಡಿ ಮುಂಭಾಗ ದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್‌ ವ್ಯವಸ್ಥೆ ಅಳವಡಿಸಿ ಗ್ರಾಹಕರನ್ನು ಬಳಸುವಂತೆ ಉತ್ತೇಜಿಸಬೇಕು, ಪ್ರತಿದಿನ ಸಿಬಂದಿಯ ಆರೋಗ್ಯ ತಪಾಸಣೆ ನಡೆಸಬೇಕು, ಪ್ರತಿ ಮೂರು ದಿನಗಳಿಗೊಮ್ಮೆ ಅಂಗಡಿಯನ್ನು ಸ್ಯಾನಿಟೈಸೇಶನ್‌ ಮಾಡಬೇಕು, ಅಂಗಡಿ ಮುಂಭಾಗದಲ್ಲಿ ಸಿಬಂದಿ ನಿಯೋಜಿಸಿ ಗ್ರಾಹಕರನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು, ಜ್ವರದ ಲಕ್ಷಣ ಕಂಡಲ್ಲಿ ಅಂಥವರ ಹೆಸರು, ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ದಾಖಲಿಸಿಕೊಂಡು ತಮ್ಮ ವ್ಯಾಪ್ತಿಯ ಆರೋಗ್ಯಾಧಿಕಾರಿ ಹಾಗೂ ಮಹಾನಗರಪಾಲಿಕೆಗೆ ತಿಳಿಸಬೇಕು. ಮಾಹಿತಿ ಸ್ವೀಕೃತವಾದ ತತ್‌ಕ್ಷಣವೇ ಮನಪಾ / ಜಿಲ್ಲಾಡಳಿತದಿಂದ ಆ್ಯಂಬುಲೆನ್ಸ್‌ ಮೂಲಕ ವ್ಯಕ್ತಿಯನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಕಳುಹಿಸ ಬೇಕು ಎಂದು ತಿಳಿಸಿದ್ದಾರೆ.

ಮೀನುಗಾರಿಕೆ, ವ್ಯಾಪಾರ, ಹಣ್ಣು ಹಂಪಲು, ತರಕಾರಿ ಹಾಗೂ ಇತರ ವ್ಯಾಪಾರ ವಹಿವಾಟು ನಡೆಸುವ ಸ್ಥಳಗಳಲ್ಲಿ ಮಂಗಳೂರು ಪಾಲಿಕೆ ಆಯುಕ್ತರು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿ ಯಲ್ಲಿ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಪ್ರತಿನಿತ್ಯ ಸರಕಾರಿ ಮಾರ್ಗಸೂಚಿಗಳನ್ನು ಜನರು, ವರ್ತಕರು ಕಡ್ಡಾಯವಾಗಿ ಪಾಲಿಸುತ್ತಿ ರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಬೋಟ್‌ಗಳಿಂದ ಮೀನು ಇಳಿಸುವ ಸಂದರ್ಭ, ಮೀನು ವ್ಯಾಪಾ ರದ ಸಂದರ್ಭ ಜನರು ಸಾಮಾಜಿಕ ಅಂತರವನ್ನು ಹಾಗೂ ಸರಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸ ಬೇಕು. ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಈ ಬಗ್ಗೆ ವಿಶೇಷ ಆದ್ಯತೆ ನೀಡಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಯಾವುದೇ ಅಂಗಡಿಗಳಲ್ಲಿ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಕ ಅಂತರ ಕಾಯ್ದುಕೊಳ್ಳದಿರುವುದು ಅಥವಾ ಷರತ್ತುಗÙ ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆ 1,000 ರೂ., ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿ 2,000 ರೂ. ಮತ್ತು 3,000 ರೂ. ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಷರತ್ತುಗಳನ್ನು ಉಲ್ಲಂಘಸಿದಲ್ಲಿ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮಗಳನ್ನು ರಚಿಸಿ ಅದನ್ನು ಅನಿಷ್ಠಾನಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಪ್ರಯಾಣಿಕರು ತಪ್ಪದೇ ಮಾಸ್ಕ್ ಬಳಸಿ, ನಿಯಮ ಪಾಲಿಸುವ ಕುರಿತಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕ್ರಮ ಕೈಗೊಳ್ಳ ಬೇಕು. ಖಾಸಗಿ ಬಸ್‌, ಆಟೋ, ಕ್ಯಾಬ್‌ ಇತ್ಯಾದಿಗಳಲ್ಲಿ ಉಲ್ಲಂಘನೆಯಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾಹನದ ಮಾಲಕ‌ರಿಗೆ ದಂಡ ವಿಧಿಸಬೇಕು. ಪೊಲೀಸ್‌ ಅಧಿಕಾರಿಗಳು ಕೂಡ ನಿಯಮಿತವಾಗಿ ತಪಾಸಣೆ ಮಾಡ ಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English