ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಿರೂಪಕಿ, ನಟಿ ಅನುಶ್ರೀ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಡ್ರಗ್ಸ್ ವಿಚಾರದಲ್ಲಿ ತನಿಖೆಗಾಗಿ ಮಂಗಳೂರು 4- 5 ಸಿಸಿಬಿ ಪೊಲೀಸರ ತಂಡ ಗುರುವಾರ ಬೆಂಗಳೂರಿಗೆ ತೆರಳಿತ್ತು.
ವಿಚಾರಣೆಯ ಸಂದರ್ಭ ಕಿಶೋರ್ ಅಮನ್ ಶೆಟ್ಟಿ ಅವರ ಆಪ್ತ ಸ್ನೇಹಿತ ತರುಣ್ ಅನುಶ್ರೀ ಅವರೊಂದಿಗೆ ಪಾರ್ಟಿ ಮಾಡಿದ್ದ ಎನ್ನುವ ವಿಚಾರವನ್ನು ತಿಳಿಸಿದ್ದು, ಅನುಶ್ರೀ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.
“ಪ್ರತೀಕ್ ಶೆಟ್ಟಿ, ಕಿಶೋರ್ ಶೆಟ್ಟಿ ಇಬ್ಬರೂ ನನಗೆ ಪರಿಚಿತರು. ನಾವು ಇವರ ಯಾವುದೇ ಪಾರ್ಟಿಗಳಿಗೆ ಹೋಗಿಲ್ಲ. ನನಗೆ ಸಿಸಿಬಿ ಪೊಲೀಸರ ಯಾವುದೇ ನೋಟಿಸ್ ಬಂದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ನನಗೆ ಆತಂಕವಿಲ್ಲ” ಎಂದು ಅನುಶ್ರೀ ಹೇಳಿದ್ದಾರೆ.
.”ಮಂಗಳೂರು ಸಿಸಿಬಿ ಪೊಲೀಸರ ತಂಡ ನಿರೂಪಕಿ ಅನುಶ್ರೀಗೆ ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿದೆ” ಎಂದು ಮಂಗಳೂರು ಡಿಸಿಪಿ ವಿನಯ್ ಗಾಂವ್ಕರ್ ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English