ಮಂಗಳೂರು : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಲ್ಲಿ ದೊಂದಿ ಬೆಳಕಿನ ಪ್ರತಿಭಟನೆ ಶುಕ್ರವಾರ ಸಂಜೆ ನಡೆಯಿತು.
ಪ್ರತಿಭಟನೆಗೆ ಅನುಮತಿವಿಲ್ಲದ ಕಾರಣ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದೇ ವೇಳೆ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣ ಕಾಂಗ್ರೆಸ್ ಮುಖಂಡರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಂತರ ಬಂಧಿತರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
Click this button or press Ctrl+G to toggle between Kannada and English